ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ12 ರಂದು ಮತದಾನ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್: ಮೇ12 ರಂದು ಮತದಾನ
27 March 2018, 11:26 am
ನವದೆಹಲಿ: ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮೇ 12ರಂದು ಮತದಾನ ನಡೆಯಲಿದೆ.

ಈ ಬಗ್ಗೆ ಇಂದು ದೆಹಲಿಯಲ್ಲಿ ಮುಖ್ಯ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಮೇ. 12ರಂದು ಮತದಾನ ನಡೆಯಲಿದ್ದು, ಮೇ 18ರಂದು ಮತಎಣಿಕೆ ಕಾರ್ಯ ನಡೆಯಲಿದೆ.

ಒಟ್ಟು 224 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 4 ಕೋಟಿ 96 ಲಕ್ಷ ಮತದಾರಿದ್ದಾರೆ. ಅವರಲ್ಲಿ 2 ಕೋಟಿ 51 ಲಕ್ಷ ಪುರುಷ ಮತದಾರಿದ್ದರೆ, 2 ಕೋಟಿ 44 ಲಕ್ಷ ಮಹಿಳಾ ಮತದಾರರಿದ್ದಾರೆ. ಕನ್ನಡ, ಇಂಗ್ಲಿಷ್​ನಲ್ಲಿ ಮತದಾರರ ಚೀಟಿ ಇರುತ್ತದೆ ಎಂದು ರಾವತ್​ ತಿಳಿಸಿದರು.

ಮೇ 28 ರಂದು ಸಿದ್ದರಾಮಯ್ಯ ಸರ್ಕಾರದ ಅವಧಿ ಮುಕ್ತಾಯವಾಗಲಿದೆ.


Post a Comment

0 Comments