ವಾಷಿಂಗ್ಟನ್: ಅನೇಕ ಭಾರತೀಯರ ನಿರೀಕ್ಷೆಗಳು ಫಲ ನೀಡಿವೆ. ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅಮೆರಿಕದ ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಭಾರತೀಯ ಮೂಲದ ಮಹಿಳೆ ಈ ಹುದ್ದೆಯನ್ನು ಅಲಂಕರಿಸುತ್ತಿರುವುದು ಇದೇ ಮೊದಲು.ಈ ಮೂಲಕ ಕಮಲಾ ಹ್ಯಾರಿಸ್ ಹೊಸ ಇತಿಹಾಸವನ್ನು ಸೃಷ್ಟಿಸಿದ್ದಾರೆ. ಈ ಮೊದಲು ಅವರು ಅನೇಕ ಹುದ್ದೆಗಳನ್ನು ಅಲಂಕರಿಸಿದ್ದಾರೆ.ಸ್ಯಾನ್ ಫ್ರಾನ್ಸಿಸ್ಕೋದ ಜಿಲ್ಲಾ ಅಟಾರ್ನಿ ಸ್ಥಾನವನ್ನು ಪಡೆದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸಿದ ಏಕೈಕ ಮಹಿಳೆ ಕೂಡ.
ಕಮಲಾ ಹ್ಯಾರಿಸ್ ಅಕ್ಟೋಬರ್ 20, 1964 ರಂದು ಆಕ್ಲೆಂಡ್ ನಲ್ಲಿ ಜನಿಸಿದರು.
ತಾಯಿ ತಮಿಳುನಾಡಿನ ಸಾಂಪ್ರದಾಯಿಕ ಕುಟುಂಬಕ್ಕೆ ಸೇರಿದವರು.ತಂದೆ ಜಮೈಕಾದವರು.
ಕಮಲಾ ವಾಷಿಂಗ್ಟನ್ ಡಿ.ಸಿ ಯ ಹೊವಾರ್ಡ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡಿದರು.
ಯುಸಿ ಹೇಸ್ಟಿಂಗ್ಸ್ ಕಾಲೇಜಿನಲ್ಲಿ ಕಾನೂನು ಅಧ್ಯಯನ.
ಅಲ್ಮೇಡಾ ಕೌಂಟಿ ಡಿಸ್ಟ್ರಿಕ್ಟ್ ಅಟಾರ್ನಿ ಕಚೇರಿಯಲ್ಲಿ ಎಂಟು ವರ್ಷ ಸೇವೆ ಸಲ್ಲಿಸಿದರು. ಪ್ರಮುಖವಾಗಿ ಅಪ್ರಾಪ್ತ ವಯಸ್ಕರ ವಿರುದ್ಧದ ಹಿಂಸಾಚಾರದ ಪ್ರಕರಣಗಳನ್ನು ತನಿಖೆ ಮಾಡಿದರು.
ಕ್ಯಾಲಿಫೋರ್ನಿಯಾ ಅಟಾರ್ನಿ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವಾಗ ಬರಾಕ್ ಒಬಾಮ ಅವರನ್ನು ಡೆಮಾಕ್ರಟಿಕ್ ಪಕ್ಷಕ್ಕೆ ಸೇರಿಸಿಕೊಂಡರು. ಕ್ಯಾಲಿಫೋರ್ನಿಯಾದ ಸೆನೆಟರ್ ಆಗಿ ಚುನಾಯಿತರಾದರು.
0 Comments