ಏನಿದು ಹಸಿರು ಪಟಾಕಿ? ಬನ್ನಿ ತಿಳಿಯೋಣ

ದೀಪಾವಳಿ ಸನ್ನಿಹಿತವಾಗುತ್ತಿದೆ. ವಾಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಸಿರು ಪಟಾಕಿಗಳನ್ನು ಸಿಡಿಸಲು ಹಾಗೂ ಮಾರಾಟ ಮಾಡಲು ಅವಕಾಶ ಮಾಡಿಕೊಟ್ಟಿದೆ.



ಆದರೆ ಈ ಹಸಿರು ಪಟಾಕಿ ಎಂದರೇನು ಎಂಬುದರ ಕುರಿತು ಜನರಿಗೆ ಗೊಂದಲಗಳಿದ್ದವು. ಇದೀಗ ಸರ್ಕಾರ ಸ್ಪಷ್ಟನೆಯನ್ನು ನೀಡಿದೆ.

ಹಸಿರು ಪಟಾಕಿಗಳು ಪರಿಸರಕ್ಕೆ ಹಾನಿ ಉಂಟು ಮಾಡುವುದಿಲ್ಲ.


ಹೀಗಾಗಿ ಈ ಪಟಾಕಿಯಿಂದ ವಾಯು ಮಾಲಿನ್ಯ ಉಂಟಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹಸಿರು ಪಟಾಕಿಯನ್ನು ಕಂಡು ಹಿಡಿಯುವುದು, ಕೊಳ್ಳುವುದು ಹೇಗೆ ಎಂಬುದರ ಕುರಿತು ಕೂಡ ಮಾಹಿತಿ ಇಲ್ಲಿದೆ. ಹಸಿರು ಪಟಾಕಿಯನ್ನು NEERI ಲ್ಯಾಬ್ ಫಾರ್ಮುಲಾದ ಪ್ರಕಾರ ತಯಾರಿಸಲಾಗುತ್ತದೆ. ಇದಕ್ಕೆ ಪೆಟ್ರೋಲಿಯಂ ಆಯಂಡ್​ ಎಕ್ಸ್​ಪ್ಲೋಸಿವ್ ಸೇಫ್ಟಿ ಆರ್ಗನೈಸೇಷನ್ ಪ್ರಮಾಣೀಕರಣ ನೀಡಿದೆ. ಗ್ರಾಹಕರು ಹಸಿರು ಪಟಾಕಿ ಖರೀದಿಸುವಾಗ ಎಚ್ಚರಿಕೆ ವಹಿಸಬೇಕು.

ಹಸಿರು ಪಟಾಕಿ ಬಾಕ್ಸ್‌ಗಳ ಮೇಲೆ‌ NEERI ಮತ್ತು PESO ಲಾಂಛನ ಇರುತ್ತದೆ. ನಿಮ್ಮ ಮೊಬೈಲ್​ನಿಂದ ಪಟಾಕಿ ಬಾಕ್ಸ್ ಮೇಲಿರುವ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಪರೀಕ್ಷಿಸಬಹುದು ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಹಸಿರು ಪಟಾಕಿಯು ಕಡಿಮೆ ಹೊಗೆಯನ್ನು ಹರಡುತ್ತದೆ. ಈ ಪಟಾಕಿ ಸಾಮಾನ್ಯ ಪಟಾಕಿಗಿಂತ ಶೇ. 30ರಷ್ಟು ಮಾತ್ರ ಮಾಲಿನ್ಯ ಮಾಡುತ್ತದೆ. ಹಸಿರು ಪಟಾಕಿಗಳು ಧೂಳೆಬ್ಬಿಸುವುದಿಲ್ಲ, ಇವನ್ನು ಗುರುತಿಸುವುದು ಸುಲಭವಾಗುವಂತೆ ಕ್ಯೂಆರ್ ಕೋಡ್ ನೀಡಲಾಗಿರುತ್ತದೆ.

ಈ ಬಾರಿ ಸಿಎಸ್​ಐಆರ್​-ನೀರಿ ಸಂಸ್ಥೆಗಳಿಂದ ಮಾನ್ಯತೆ ಪಡೆದಿರುವ ಕಂಪನಿಗಳನ್ನು ಮಾತ್ರ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಹಸಿರು ಪಟಾಕಿ ಎಂದರೆ ಸಾಮಾನ್ಯ ಪಟಾಕಿಗಿಂತ ಕಡಿಮೆ ಮಾಲಿನ್ಯ ಮಾಡುವ ಪಟಾಕಿ.

CSIR ಮತ್ತು NEERI ಸಂಶೋಧನಾ ಸಂಸ್ಥೆಗಳು ಜಂಟಿಯಾಗಿ ಹಸಿರು ಪಟಾಕಿಯನ್ನು ಅಭಿವೃದ್ದಿ ಪಡಿಸಿವೆ.

Post a Comment

0 Comments