TET-2019 ಫಲಿತಾಂಶ ಪ್ರಕಟ

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ್ದ 2019 ರ ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗಿದ್ದು, 7,980 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.



ಟಿಇಟಿ ಪರೀಕ್ಷೆಗೆ ಒಟ್ಟು 2,02,991 ಅಭ್ಯರ್ಥಿಗಳ ಪೈಕಿ 7,980 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದು, ಈ ವರ್ಷ ಶೇ. 3.93 ಫಲಿತಾಂಶ ಬಂದಿದೆ. ಅಕ್ಟೋಬರ್ ನಲ್ಲಿ ಪರೀಕ್ಷೆ ನಡೆದಿತ್ತು. ಸಾಮಾನ್ಯ ವರ್ಗದವರಿಗೆ ಶೇ. 60 ಮತ್ತು ಹಿಂದುಳಿದ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಅಭ್ಯರ್ಥಿಗಳಿಗೆ ಶೇ. 55 ಅರ್ಹತಾ ಅಂಕಗಳನ್ನು ನಿಗದಿಪಡಿಸಿ ಫಲಿತಾಂಶ ಪ್ರಕಟಿಸಿದೆ.


Post a Comment

0 Comments